Advertise

10 April 2026

11.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಅಧಿಕವಾಗಲಿದ್ದು, ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ ಮುಂಜಾನೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 15ರ ನಂತರ ಮಳೆ ಅರಂಭವಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ರಾತ್ರಿ ಅಥವಾ ನಾಳೆ ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಿರಿಲಿದ್ದು, ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ (ಕೊಡಗು ಹೊರತುಪಡಿಸಿ) ಎಪ್ರಿಲ್ 15ರ ತನಕ ಮಳೆಯ ನಿರೀಕ್ಷೆ ಕಡಿಮೆಯಾಗತ್ತಲಿದ್ದು, ನಂತರ ಮಳೆಯಾಗುವ ಸೂಚನೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಧಿಕ ತಾಪಮಾನದೊಂದಿಗೆ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಎಪ್ರಿಲ್ 25ರ ತನಕ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿವೆ. 

ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವವು ನಿಧಾನವಾಗಿ ಬಲಗೊಳ್ಳುವ ನಿರೀಕ್ಷೆಗಳಿವೆ. 

No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...