ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಮೋಡ, ಅಧಿಕ ತಾಪಮಾನ ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗಲು ಮೋಡ ಹಾಗೂ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಗಾಳಿಯ ಒತ್ತಡ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ತುಂತುರು ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಧಿಕ ತಾಪಮಾನದ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 17ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಗಾಳಿಯ ಒತ್ತಡ ಹೆಚ್ಚಿದ್ದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯ ಭಾಗದಿಂದ ಗಾಳಿಯ ಬೀಸುವಿಕೆ ಪ್ರಭಲಗೊಳ್ಳುವ ಸಾಧ್ಯತೆಗಳಿದ್ದು, ಎಪ್ರಿಲ್ 15ರ ನಂತರ ರಾಜ್ಯದಲ್ಲಿ ಪರಿಸ್ಥಿತಿ ಬದಲಾಗಬಹುದು.
No comments:
Post a Comment