ಕರಾವಳಿ : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇವತ್ತು ಜೋರು ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಬಿಸಿಲು ಹಾಗೂ ಅಧಿಕ ತಾಪಮಾನದ ವಾತಾವರಣ ಇರಲಿದೆ.
ದಕ್ಷಿಣ ಕನ್ನಡ, ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ವಿಪರೀತ ಸೆಖೆಯ ವಾತಾವರಣದಿಂದಾಗಿ ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಅನಿರೀಕ್ಷಿತ ಹಾಗೂ ಸಣ್ಣ ವ್ಯಾಪ್ತಿಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಎಪ್ರಿಲ್ 15ರ ನಂತರ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಎಪ್ರಿಲ್ 15ರ ನಂತರ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ಎಪ್ರಿಲ್ 18ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಳೆ ಆರಂಭವಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಎಪ್ರಿಲ್ 15ರ ನಂತರ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಳೆ ಆರಂಭವಾಗುವ ಸೂಚನೆಗಳಿವೆ.
ಹಿಂದೂಮಹಾಸಾಗರದಲ್ಲಿ ಮುಂಗಾರು ತನ್ನ ಹಾದಿಯಲ್ಲಿ ಕ್ರಮಿಸಲು ಆರಂಭವಾಗಿದ್ದು, ಯಾವುದೇ ವಾಯುಭಾರ ಕುಸಿತಗಳು ಉಂಟಾಗದಿದ್ದರೆ ಅಂಡಮಾನ್, ನಿಕೋಬಾರ್ ಗೆ ಮುಂಗಾರು ಅವಧಿ ಪೂರ್ವ ಆಗಮನದ ನಿರೀಕ್ಷೆ ಇದೆ.
No comments:
Post a Comment