Advertise

15 April 2026

15.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಅಧಿಕ ತಾಪಮಾನ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 18 ಅಥವಾ 19ರಂದು ಅಲ್ಲಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

ಮಲೆನಾಡು : ಮಲೆನಾಡಿನ ಕೊಡಗು, ಹಾಸನ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 19ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 20ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣ ಇರಬಹುದು.

ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದ್ದು, ಎಪ್ರಿಲ್ 18ರ ತನಕ ಕಾದು ನೋಡಬೇಕಾಗಿದೆ.

2026ರ ಜೂನ್ ತಿಂಗಳಲ್ಲಿ ಎಲ್ನಿನೋ ಆರಂಭವಾಗುವ ಸಾಧ್ಯತೆಗಳು ಹೆಚ್ಚುತ್ತಿದ್ದರೂ, ಮಳೆ ಸಂಪೂರ್ಣ ಕಡಿಮೆಯಾಗುವ ಸೂಚನೆಗಳು ಇಲ್ಲ. ಬಂದ ಮಳೆಯ ನೀರನ್ನು ಸಂಗ್ರಹಿಸುವ ( ಕೃಷಿ ಹೊಂಡಗಳ ಮೂಲಕ) ಯೋಜನೆ ಹಾಕಿಕೊಳ್ಳುವುದು ಉತ್ತಮ. ಇದರಿಂದ ಕೃಷಿಕರಿಗೆ, ರೈತರಿಗೆ ಹೆಚ್ಚಿನ ಅನುಕೂಲವಾಗಬಹುದು. ಇದಕ್ಕೆ ರಾಜ್ಯ ಸರ್ಕಾರದ ಸಹಾಯಧನವೂ ಲಭಿಸುವ ವರದಿಗಳಿವೆ. 

No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...