ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಹಾಗೂ ಭಾರಿ ಸೆಖೆಯ ವಾತಾವರಣದೊಂದಿಗೆ ಸಂಜೆ ಅಥವಾ ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ
ಈಗಿನಂತೆ ಎಪ್ರಿಲ್ 18ರಿಂದ ಸಾಮಾನ್ಯ ಮಳೆ ಆರಂಭವಾಗುವ ಸಾಧ್ಯತೆಗಳಿದ್ದು, 21ರಿಂದ ಜೋರಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೋಡ ಹಾಗೂ ಸಂಜೆ ಅಥವಾ ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಅನಿರೀಕ್ಷಿತ ಮಳೆಯಾಗುತ್ತಿದ್ದು, ಈ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಈಗಿನಂತೆ ಎಪ್ರಿಲ್ 18ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳ ಒಂದೆರಡು ಕಡೆ ಸಂಜೆ ತುಂತುರು ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಭಾರಿ ತಾಪಮಾನದಿಂದಾಗಿ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಎಪ್ರಿಲ್ 19 ಅಥವಾ 20ರಂದು ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ಮೋಡದ ವಾತಾವರಣ ಇರಲಿದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲು ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳು ಇಲ್ಲದಿದ್ದರೂ, ಎಪ್ರಿಲ್ 18ರಂದು ಕಾದು ನೋಡಬೇಕಾಗಿದೆ.
No comments:
Post a Comment