Advertise

17 April 2026

18.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


18.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಕಡಿಮೆಯಾಗಿ ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಹಾಗೂ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಗಾಳಿಯ ಒತ್ತಡ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚಿರಬಹುದು
ಈಗಿನಂತೆ ಎಪ್ರಿಲ್ 18ರ ನಂತರ ಮಳೆಯ ಪ್ರಮಾಣ ಹಾಗೂ ವ್ಯಾಪ್ತಿ ಹೆಚ್ಚಾಗುವ ನಿರೀಕ್ಷೆ ಇದೆ. 

ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿಯೂ ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣ ಇದ್ದು, ಸಂಜೆ ಕೊಡಗು ಜಿಲ್ಲೆಯ ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಎಪ್ರಿಲ್ 18ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು ; ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ  ಎಪ್ರಿಲ್ 20ರಿಂದ ಮಳೆ ಆರಂಭವಾಗುವ ಸೂಚನೆಗಳಿವೆ. 

 ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದ ಬಿಸಿಲಿನ ವಾತಾವರಣ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎಪ್ರಿಲ್ಗು 20ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ರಾಜ್ಯದಾದ್ಯಂತ ತಾಪಮಾನ ದಾಖಲೆಯ ಏರಿಕೆಯಾದರೂ, ಈ ಮೊದಲೇ ತಿಳಿಸಿದಂತೆ ( ಎಪ್ರಿಲ್ 15ರ ನಂತರ ಪರಿಸ್ಥಿತಿ ಬದಲಾಗಬಹುದು (ಎಪ್ರಿಲ್ 11ರ ವರದಿಯಲ್ಲಿ) ), ಎಪ್ರಿಲ್ ಕೊನೆಯ 2 ವಾರಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಬೇಸಿಗೆ ಮಳೆಯ ನಿರೀಕ್ಷೆ ಇದೆ. 



No comments:

Post a Comment

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...