ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಧಿಕ ತಾಪಮಾನದೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಧ್ಯಾಹ್ನ ನಂತರ, ಸಂಜೆ ಕಾಸರಗೋಡು ಜಿಲ್ಲೆಯಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹೆಚ್ಚು ಉಷ್ಣಾಂಶದ ಕಾರಣದಿಂದ ಅಲ್ಲಲ್ಲಿ ಭಾರಿ ಗಾಳಿಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಮುಂದಿನ ಎರಡು, ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ ಹಾಗೂ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ, ಹಾವೇರಿ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 3, 4 ದಿನಗಳ ಕಾಲ ಮಳೆ ಮುಂದುವರಿಯುವ ಸೂಚನೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ತಾಪಮಾನ ಹಾಗೂ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮಳೆಯ ಸಾಧ್ಯತೆಗಳು ಕಾಣಿಸದಿದ್ದರೂ, ಗಾಳಿಯ ಒತ್ತಡ ಹೆಚ್ಚಿದ್ದರೆ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎಪ್ರಿಲ್ 23 ಅಥವಾ 24ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
No comments:
Post a Comment