Advertise

20 April 2026

21. 04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :


ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಕಡಿಮೆ ಇದ್ದು, ಹೆಚ್ಚು ಬಿಸಿಲಿನ ತಾಪಮಾನ ಇರಲಿದ್ದು, ದ ಸಂಜೆ, ರಾತ್ರಿ ವೇಳೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ಸಂಜೆ ಮಲೆನಾಡಿನ ಗಾಳಿಯ ಪ್ರಭಾವದಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ  ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದ್ದು, ಎಪ್ರಿಲ್ 26ರಿಂದ ಸರಿಯಾಗಿ ಗುಡುಗು ಸಹಿತ ಬೇಸಿಗೆ ಮಳೆಯು ಆರಂಭವಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಎಪ್ರಿಲ್ 26ರಿಂದ ಮಳೆಯ ಹೆಚ್ಚಾಗುವ ನಿರೀಕ್ಷೆ
 ಇದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಹಾವೇರಿ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ಅಧಿಕ ತಾಪಮಾನದ ಹಾಗೂ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬೇಸಿಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ಎಪ್ರಿಲ್ 25ರಂದು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ. 

ಅರಬ್ಬಿ ಸಮುದ್ರದ ಕಡೆಯಿಂದ ಪ್ರಭಲವಾಗಿ ಬೀಸುತ್ತಿರುವ ಗಾಳಿಯೊಂದಿಗೆ ಕನ್ಯಾಕುಮಾರಿ ಕಡೆಯಿಂದ ಅಂದರೆ ದಕ್ಷಿಣದ ಗಾಳಿಯೂ ಸೇರಿಕೊಂಡು ಮೋಡಗಳನ್ನು ಉತ್ತರಕ್ಕೆ ಕೊಂಡೊಯ್ಯುತ್ತಿವೆ. 
ಈ ಪರಿಸ್ಥಿತಿ ಬದಲಾದರೆ ಮಾತ್ರ ಕರಾವಳಿ 
ಜಿಲ್ಲೆಗಳಲ್ಲಿ ಮಳೆಯಾಗಬಹುದು. 

No comments:

Post a Comment

21. 04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...