ಕರಾವಳಿ : ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಸಂಜೆ ಕರ್ನಾಟಕದ ಗಡಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಬಿಸಿಲು ಹಾಗೂ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ನಿನ್ನೆಗಿಂತ ಮಳೆ ಕಡಿಮೆ ಇರಬಹುದು.
ಈಗಿನಂತೆ ಮುಂದಿನ 3, 4 ದಿನಗಳ ಕಾಲವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ, ಪ್ರಭಾವ ಹೆಚ್ಚಿದ್ದರೆ ಉಳಿದ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಎಪ್ರಿಲ್ 25ರ ತನಕ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸೂಚನೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆಯ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಎಪ್ರಿಲ್ 26ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.
No comments:
Post a Comment