Advertise

22 April 2026

23.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮುಂಜಾನೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಿದ್ದ ಕಾರಣ ಇವತ್ತು ಇನ್ನು ಮಳೆಯ ಸಾಧ್ಯತೆ ಕಡಿಮೆ ಇರಬಹುದು. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿವೆ. ಎಪ್ರಿಲ್ 25ರಿಂದ ಮತ್ತೆ ಮಳೆಯ ಮುನ್ಸೂಚನೆ ಇದೆ. 

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. 
ಈಗಿನಂತೆ ಎಪ್ರಿಲ್ 24ರ ತನಕ ಮಳೆಯ ಪ್ರಮಾಣ ಕಡಿಮೆ ಇರುವ ಲಕ್ಷಣಗಳಿವೆ. 25ರಿಂದ ಮಳೆ ಹೆಚ್ಚಾಗುವ ಸೂಚನೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಎಪ್ರಿಲ್ 25ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎಪ್ರಿಲ್ 26ರಿಂದ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 

ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಪ್ರತ್ಯಾವರ್ತ ಮಾರುತಗಳು ( anti cyclonic circulation) ಉಂಟಾಗಿದ್ದು, ಪರಿಣಾಮಗಳನ್ನು ಕಾದು ನೋಡಬೇಕಾಗಿದೆ. 

No comments:

Post a Comment

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...