Advertise

23 April 2026

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ತಾಪಮಾನ ಏರಿಕೆಯಾಗುವ ಲಕ್ಷಣಗಳಿದ್ದು, ಸಂಜೆ ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. (ಮುನ್ಸೂಚನೆ ಪ್ರಕಾರ ಇಂದು ಮಳೆಯ ಸಾಧ್ಯತೆ ಕಡಿಮೆ). 
ಈಗಿನಂತೆ ಎಪ್ರಿಲ್ 25 ಅಥವಾ 26ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಸೂಚನೆಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಏರಿಕೆಯ ತಾಪಮಾನ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. (ಮುನ್ಸೂಚನೆ ಪ್ರಕಾರ ಸಾಧ್ಯತೆ ಕಡಿಮೆ).
ಈಗಿನಂತೆ ಎಪ್ರಿಲ್ 25ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಹೆಚ್ಚಿನ ತಾಪಮಾನ, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿಯೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಬಿಸಿಲು ಹಾಗೂ ಅಧಿಕ ತಾಪಮಾನದೊಂದಿಗೆ ಮೈಸೂರು ಹಾಗೂ ಚಾಮರಾಜನಗರದ ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಪ್ರತ್ಯಾವರ್ತ ಮಾರುತಗಳು ಮುಂದುವರಿದಿದ್ದು, ಎಪ್ರಿಲ್ ಕೊನೆಯಲ್ಲಿ ಹಾಗೂ ಮೇ ಮೊದಲ ವಾರದಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ. 

No comments:

Post a Comment

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...