Advertise

25 April 2026

26.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸುತ್ತಮುತ್ತ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ, ಸೋಮೇಶ್ವರ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಎಪ್ರಿಲ್ 26ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.

ಮಲೆನಾಡು : ಕೊಡಗು, ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ
ಈಗಿನಂತೆ ಎಪ್ರಿಲ್ 26ರಿಂದ ಮಳೆಯ ಪ್ರಮಾಣವು ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಬಾಗಲಕೋಟೆ ಜಿಲ್ಲೆಯ ಅಲ್ಲಲ್ಲಿ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ   ಕಡಿಮೆಯಾತ್ತಲಿದ್ದು, ಎಪ್ರಿಲ್ 28ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು ; ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಎಪ್ರಿಲ್ 28ರಿಂದ ಪ್ರಾರಂಭವಾಗುವ ಸೂಚನೆಗಳಿವೆ

No comments:

Post a Comment

28.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...