ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಹಾಗೂ ಭಾರಿ ಸೆಖೆಯ ವಾತಾವರಣದೊಂದಿಗೆ ಸಂಜೆ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಉಳಿದ ಭಾಗಗಳಲ್ಲಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಮಳೆಯ ಸಾಧ್ಯತೆ ಕಡಿಮೆ ಅಂತಿದ್ದರೂ, ಭಾರಿ ಸೆಖೆ ಹಾಗೂ ಹೆಚ್ಚು ತೇವಾಂಶದ ಕಾರಣದಿಂದ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎಪ್ರಿಲ್ 28ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಹಾಗೂ ಅಧಿಕ ತಾಪಮಾನದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಎಪ್ರಿಲ್ 28ರಿಂದ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸೂಚನೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಇವತ್ತು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ಎಪ್ರಿಲ್ 28ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.
No comments:
Post a Comment