27 April 2026

28.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಭರಿತ ಹೆಚ್ಚು ಉಷ್ಣಾಂಶದಿಂದ ಕೂಡಿದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯ ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 28ರಿಂದ ಅಲ್ಲಲ್ಲಿ ಸಾಮಾನ್ಯ ಹಾಗೂ 29ರಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯ ಕೇರಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಹೆಚ್ಚಿನ ಉಷ್ಣಾಂಶದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಎಪ್ರಿಲ್ 29ರಿಂದ ಮಳೆ ಪುನರಾರಂಭಗೊಳ್ಳುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು, ಅಧಿಕ ತಾಪಮಾನ ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಎಪ್ರಿಲ್ 29ರಿಂದ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ. 

ಮೇ ಮೊದಲ ವಾರದಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅರಬ್ಬಿ ಸಮುದ್ರ ಗಾಳಿಯ ತೀವ್ರತೆಯಂದಾಗಿ ಮುಂಗಾರು ರೀತಿಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆಗಳಿವೆ. ಮುಂಜಾನೆಯಿಂದಲೇ ಅಲ್ಲಲ್ಲಿ ಮಳೆ ಆರಂಭವಾದರೂ ನಿರಂತರ ಮಳೆಯ ಸಾಧ್ಯತೆ ಕಡಿಮೆ ಇರಬಹುದು ಹಾಗೂ ವಾತಾವರಣದ ಉಷ್ಣಾಂಶ ಸ್ವಲ್ಪ ಮಟ್ಟಿಗೆ ಇಳಿಕೆಯಾಗಬಹುದು. 


No comments:

Post a Comment