ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಸಿಲು, ಅಧಿಕ ತೇವಾಂಶದೊಂದಿಗೆ ತಾಪಮಾನ, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಉತ್ತರ ಕನ್ನಡದ ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಗಾಳಿಯ ಒತ್ತಡ ಹಾಗೂ ಅಧಿಕ ತಾಪಮಾನದ ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 29ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಎಪ್ರಿಲ್ 29ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಧಿಕ ತಾಪಮಾನದ ಮುನ್ಸೂಚನೆ ಇದ್ದು, ಎಪ್ರಿಲ್ 29ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.
No comments:
Post a Comment