ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸೆಖೆಯ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಹಾಗೂ ಮುಂಜಾನೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆಯಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಮುಂದಿನ 3 ದಿವಸಗಳ ಕಾಲ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 3 ದಿವಸಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಜಿಲ್ಲೆಗಳಲ್ಲೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 1ರ ತನಕ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮೇ ತಿಂಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.
No comments:
Post a Comment