ಕರಾವಳಿ : ಕಳೆದೆರಡು ದಿನಗಳಿಂದ ಮುನ್ಸೂಚನೆ ಇದ್ದರೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿಲ್ಲ.
ಇವತ್ತು ಸಹ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ. 2ರಿಂದ ಮೂರು ದಿನಗಳ ಕಾಲ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ. ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮೇ 2ರಿಂದ ಮಳೆ ಕಡಿಮೆ ಇದ್ದು, ಮೇ 5 ಅಥವಾ 6 ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದ್ದು, ಮೇ 6ರ ನಂತರ ಮಳೆಯ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 2ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಕಡಿಮೆಯಾಗುವ ಸೂಚನೆಗಳಿವೆ.