ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ. ಥಡ ರಾತ್ರಿ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಗೆ ಜೂನ್ 7ರ ಸುಮಾರಿಗೆ ಮುಂಗಾರು ಆಗಮನದ ನಿರೀಕ್ಷೆ ಇದೆ.
ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 7 ಅಥವಾ 8ರಿಂದ ಮುಂಗಾರು ಆರಂಭವಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೆ ಗಾಳಿಯ ದಿಕ್ಕು ಬದಲಾದರೆ ಹಾಗೂ ಒತ್ತಡ ಹೆಚ್ಚಿದ್ದರೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಕಲಬುರ್ಗಿ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಮಳೆ ಸಾಧ್ಯತೆಗಳಿವೆ.
ಈಗಿನಂತೆ ಜೂನ್ 1ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳ ಲ್ಲಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಸೂಚನೆಗಳಿವೆ.
ಜೂನ್ 4ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿದ್ದರೂ ದುರ್ಬಲವಾಗಿರಲಿದೆ. ಜೂನ್ 8ರ ಸುಮಾರಿಗೆ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಲಕ್ಷಣಗಳಿವೆ.
ಒಟ್ಟಿನಲ್ಲಿ ಈ ವರ್ಷದ ಮುಂಗಾರು ಅತಿ ದುರ್ಬಲವಾಗಿರುವ ವರದಿಗಳಿವೆ.
ಅಷ್ಟು ಇಷ್ಟು ಬಂದ ಮಳೆಯ ನೀರನ್ನು ರೈತರು ಕೃಷಿ ಹೊಂಡಗಳ ಮೂಲಕ ಸಂಗ್ರಹಿಸುವ ಕಾರ್ಯ ಕೈಗೊಳ್ಳುವುದು ಉತ್ತಮ. ಸರ್ಕಾರದ ಸಹಾಯಧನವೂ ಲಭಿಸುತ್ತಿದೆ. ಸ್ಥಳೀಯ ಕೃಷಿ ಇಲಾಖೆಯಲ್ಲಿ ಹೆಚ್ಚಿನ ಮಾಹಿತಿ ಸಿಗಬಹುದು.
No comments:
Post a Comment