ಕರಾವಳಿ : ನಿನ್ನೆ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿತ್ತು. ಇವತ್ತು ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಮೋಡ ಇರಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಮಣ್ಯ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 6ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ನಿರೀಕ್ಷೆ ಇದೆ.
ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮೇ 6ರಿಂದ ಮಳೆಯ ಪ್ರಮಾಣ ಹಾಗೂ ವ್ಯಾಪ್ತಿ ಹೆಚ್ಚಾಗುವ ನಿರೀಕ್ಷೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಧಾರವಾಡ, ಗದಗ, ವಿಜಾಪುರ, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ ರಂದು ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 6ರಿಂದ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಕರಾವಳಿಯಲ್ಲಿ ಮೇ 10ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.
No comments:
Post a Comment