Advertise

07 May 2026

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ರಾಜ್ಯದ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಈಗಾಗಲೇ ಇವತ್ತು ಮುಂಜಾನೆ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಉತ್ತರ ಕನ್ನಡ ಸಹಿತ ಗುಡುಗು ಸಹಿತ೨ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು, ಹಾಸನ,ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇವತ್ತು ಹಾಗೂ ನಾಳೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಬಹುದು. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಮಳೆ ಮುಂದುವರಿಯುವ ಸೂಚನೆಗಳಿವೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ದಿನವು ಮುಂದೆ ಸಾಗುತ್ತಿದ್ದು, ಈಗಿನಂತೆ ಮೇ 11ರಂದು ಉತ್ತರ ಸುಮಾತ್ರ ಕರಾವಳಿಯಲ್ಲಿ ತಿರಿಗುವಿಕೆ ಆರಂಭವಾಗುವ ಲಕ್ಷಣಗಳಿವೆ. 

No comments:

Post a Comment

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...