ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಗಲು ಬಿಸಿಲು, ಸೆಖೆ ಹೆಚ್ಚಿರುವುದರಿಂದ ಮಳೆಯೊಂದಿಗೆ ಗಾಳಿಯ ವೇಗವೂ ಹೆಚ್ಚಿರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 10ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ. ನಂತರ ಕಡಿಮೆಯಾಗಬಹುದು.
ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡಿನ ಕೊಡಗು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮೇ 10ರ ನಂತರ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಗಾಳಿಯ ಒತ್ತಡ ಹಾಗೂ ದಿಕ್ಕು ಬದಲಾದರೆ ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 10ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.
ದಕ್ಷಿಣ ಒಳನಾಡು :ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಮೇ 19ರಿಂದ 3 ಅಥವಾ 4 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯಲ್ಲಿ ಮೇ 11ರಂದು ಉಂಟಾಗಲಿರುವ ವಾಯುಭಾರ ಕುಸಿತವು ಅನಿಶ್ಚಿತತೆಯಿಂದ ಕೂಡಿದೆ. ಪರಿಸ್ಥಿತಿ ಕಾದು ನೋಡಬೇಕಾಗಿದೆ.
No comments:
Post a Comment