Advertise

09 May 2026

10.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ತಡ ರಾತ್ರಿ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ತಡ ರಾತ್ರಿ, ಮುಂಜಾನೆ ಹೆಚ್ಚು ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 10ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮೇ 10ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ ಜಿಲ್ಲೆಗಳ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಈಗಿನಂತೆ ನಾಳೆಯಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಾಣಿಸುತ್ತಿಲ್ಲ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರದ, ರಾಮನಗರ ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳ ತಮಿಳುನಾಡು ಗಡಿಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ಬಂಗಾಳಕೊಲ್ಲಿಯಲ್ಲಿ ಮೇ 12ರಂದು ಶ್ರೀಲಂಕಾ ಬಳಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಮುಂದಿನ 2 ಅಥವಾ 3 ದಿವಸಗಳಲ್ಲಿ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಇದರ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. 

No comments:

Post a Comment

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...