ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ತೀರ ಭಾಗಗಳಲ್ಲಿ ತಡ ರಾತ್ರಿ ಅಥವಾ ಮುಂಜಾನೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಗಾವಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 11ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸೋಮವಾರಪೇಟೆ, ಶನಿವಾರಸಂತೆ ಸುತ್ತಮುತ್ತ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಿಕ್ಕಮಗಳೂರುಜ ಜಿಲ್ಲೆಯ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳ ಸುತ್ತಮುತ್ತ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 11ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುವ ಸೂಚನೆಗಳಿವೆ.
ಉತ್ತರ ಒಳನಾಡು : ಬೆಳಗಾವಿ ಜಿಲ್ಲೆಯ ಉತ್ತರ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗಲು ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಅಲ್ಲಲ್ಲಿ ಮೋಡ ಹಾಗೂ ಅಧಿಕ ತಾಪಮಾನದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಇವತ್ತು ಮಳೆಯ ಸಾಧ್ಯತೆ ಕಡಿಮೆ ಇರುವ ಮುನ್ಸೂಚನೆ ಇದೆ.
ಈಗಿನಂತೆ ಮೇ 13ರ ತನಕವೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆ ಇರಬಹುದು.
ಮೇ 11ರಂದು ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಮುಂದಿನ 3 ಅಥವಾ 4 ದಿನಗಳಲ್ಲಿ ಅದು ಅಲ್ಲೇ ಶಿಥಿಲಗೊಳ್ಳುವ ಸಾಧ್ಯತೆಗಳಿವೆ.
ಮೇ 15ರಿಂದ ಹಿಂದೂಮಹಾಸಾಗರ ಹಾಗೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆಯು ಚುರುಕಾಗುವ ಲಕ್ಷಣಗಳಿವೆ.
No comments:
Post a Comment