12.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಗಲು ಮೋಡ ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಗುಡುಗು ಸಹಿತ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಮಳೆ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಅಲ್ಲಲ್ಲಿ ನಿನ್ನೆ ಅನಿರೀಕ್ಷಿತವಾಗಿ ಮಳೆಯಾಗಿದೆ. ಇವತ್ತು ಸಹ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಕಲಬುರ್ಗಿ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಮುನ್ಸೂಚನೆಯಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ 2 ದಿವಸಗಳ ಅಲ್ಲೇ ಶಿಥಿಲಗೊಳ್ಳುವ ಸಾಧ್ಯತೆಗಳಿವೆ.
No comments:
Post a Comment