Advertise

12 May 2026

13.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸೆಖೆಯ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 14ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ಮೇ 20ರ ಸುಮಾರಿಗೆ ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ತೀರ ಭಾಗಗಳಲ್ಲಿ ಮುಂಗಾರು ರೀತಿಯ ಮಳೆಯಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರಬಹುದು. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೇ 14ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸೂಚನೆಗಳಿವೆ. ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆ ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಜೋರು ಮಳೆಯ ಸಾಧ್ಯತೆಗಳು ಗೋಚರಿಸುತ್ತಿಲ್ಲ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಮೇ 14ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. 

ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದು ಶಿಥಿಲಗೊಳ್ಳುತ್ತಿದ್ದಂತೆಯೇ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.  

No comments:

Post a Comment

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...