ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 16ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 16ರಿಂದ ಕೊಡಗು ಹೊರತುಪಡಿಸಿ ಉಳಿದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಮುಂದಿನ 2 ಅಥವಾ 3 ದಿನಗಳ ಕಾಲ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 3 ಅಥವಾ 4 ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ಈಗಿನ ತಿರುವಿಕೆಯು ಶಿಥಿಲಗೊಳ್ಳುತ್ತಿದ್ದು, 2026ನೇ ಸಾಲಿನ ಮುಂಗಾರು ಮೇ 16, 17ರಂದು ಅಂಡಮಾನ್ ತಲಪುವ ನಿರೀಕ್ಷೆಯಿದೆ. ರಾಜ್ಯಕ್ಕೆ ಮೇ 20ರಿಂದ 25ರ ಅಂದಾಜು ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ.
No comments:
Post a Comment