ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಈಗಿನ ಪೂರ್ವ ಮುಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಕೊಡಗು ಜಿಲ್ಲೆಯನ್ನು ಹೊರತು ಉಳಿದ ಜಿಲ್ಲೆಗಳಲ್ಲಿ ಮೇ 16ರ ನಂತರ ಮಳೆ ಕಡಿಮೆಯಾಗುವ ಸೂಚನೆಗಳಿದ್ದರೂ ಬದಲಾಗಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಕಡಿಮೆಯಾಗಬಹುದು.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಮೇ 15 ಅಥವಾ 16ರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯ ತಿರುಗುವಿಕೆಯು ಶಿಥಿಲಗೊಂಡಿದ್ದು, ಮುಂಗಾರು ಮಾರುತಗಳು ಅಂಡಮಾನ್ ದ್ವೀಪವನ್ನು ಪ್ರವೇಶಿಸಿವೆ. ಮುಂದೆ ಯಾವುದೇ ವಾಯುಭಾರ ಕುಸಿತಗಳು ಉಂಟಾಗದಿದ್ದರೆ, ಸುಮಾರು ಮೇ 20, 25ರ ನಡುವೆ ಕೇರಳ ರಾಜ್ಯಕ್ಕೆ ಪ್ರವೇಶಿಸಲಿದೆ. ಈ ತಿಂಗಳ ಕೊನೆಯಲ್ಲಿ ರಾಜ್ಯಕ್ಕೆ ಮುಂಗಾರು ಆಗಮನದ ನಿರೀಕ್ಷೆ ಇದೆ. ಮುಂಗಾರು ಆರಂಭ ದುರ್ಬಲವಾಗಿರುವ ಸಾಧ್ಯತೆಗಳಿವೆ.
IMD ವರದಿಯಂತೆ ಮುಂಗಾರು ರಾಜ್ಯದಲ್ಲಿ ಜೂನ್ - ಸೆಪ್ಟೆಂಬರ್ ವಾಡಿಕೆಗಿಂತ ಕಡಿಮೆ ಇರಬಹುದು.
No comments:
Post a Comment