Advertise

15 May 2026

16.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಮೇ 19ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 19ರ ತನಕ ಮಳೆ ಮುಂದುವರಿಯುವ ಸೂಚನೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಕೊಪ್ಪಳ, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಮಾತ್ರ ಮಳೆಯ ಪ್ರಮಾಣ ಹೆಚ್ಚಿರಬಹುದು.
ಈಗಿನಂತೆ ಮೇ 17ರ ನಂತರ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 19ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮುಂಗಾರು ಅಂಡಮಾನ್ ದ್ವೀಪ ತಲುಪಿಧರೂ, ಮೇ 17ರಿಂದ ಹಿಂದೂಮಹಾಸಾಗರ ಮೂಲಕ ಸಾಗಿ ಬರುವ ಮುಂಗಾರು ಮಾರುತಗಳು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ರಾಜ್ಯಕ್ಕೆ ಮುಂಗಾರು ಪ್ರವೇಶ ನಿಗಧಿತ ಸಮಯದಲ್ಲಿ ಪ್ರವೇಶಿಸುವ ಸಾಧ್ಯತೆಗಳು ಕಾಣಿಸುತ್ತಿಲ್ಲ. 

No comments:

Post a Comment

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...