Advertise

16 May 2026

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದಲೇ ಮೋಡ ಹಾಗೂ ಮುಂಗಾರು ರೀತಿಯಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಹಲವು ಭಾಗಗಳಲ್ಲಿ ಗುಡುಗು ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚನೆ ಇದೆ.
ಈಗ ಪೂರ್ವ ಮುಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ. ಮೇ 20ರಿಂದ ಮುಂಗಾರು ರೀತಿಯಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮೇ 19ರ ತನಕ ಪೂರ್ವ ಮುಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 18ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮೇ 19ರಿಂದ ಮಳೆ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಮಾತ್ರ ಇರಬಹುದು.
ಈಗಿನಂತೆ ಮೇ 18ರ ತನಕ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಮುಂಗಾರು ಅಂಡಮಾನ್ ಗೆ ಈಗಾಗಲೇ ತಲುಪಿದ್ದು, ಮೇ 20ರ ಸುಮಾರಿಗೆ ಕೇರಳಕ್ಕೆ ತಲಪುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಮುಂಗಾರು ಮುಂದುವರಿಕೆಗೆ ಅಡ್ಡಿಯಾಗುವ ಸಾಧ್ಯತೆಗಳಿವೆ. 

No comments:

Post a Comment

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...