18.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 19 ಅಥವಾ 20ರಿಂದ ಅರಬ್ಬಿ ಸಮುದ್ರದ ಕಡೆಯಿಂದ ಗಾಳಿಯು ಮುಂಗಾರು ಮಾರತಗಳ ರೀತ ಚಲನೆಯು ಆರಂಭವಾಗುವ ಲಕ್ಷಣಗಳಿವೆ. ಆದರೆ ಮಳೆ ದುರ್ಬಲವಾಗಿರುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗುತ್ತಿಲ್ಲ. ಇವತ್ತು ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 19ರ ನಂತರ ಮಳೆಯ ಪ್ರಮಾಣ ಸ್ವಲ್ಪ ಇಳಿಕೆಯಾಗಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಚಿತ್ರದುರ್ಗ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಮೇ 19ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ..
ಅರಬ್ಬಿ ಸಮುದ್ರದಲ್ಲಿ ಮೇ 19ರಂದು ಸಣ್ಣ ಪ್ರಮಾಣದ ತಿರುಗುವಿಕೆಯು ಮುಂಗಾರು ಮುಂದುವರಿಕೆಗ ಸ್ವಲ್ಪ ತೊಡಕಾಗಬಹುದು.
ಆದರೆ ಬಂಗಾಳಕೊಲ್ಲಿಯಲ್ಲಿ ತಮಿಳುನಾಡು ಕರಾವಳಿಯ ಮೂಲಕ ಒಳ ನುಗ್ಗುವ ಗಾಳಿಯು ದಿಕ್ಕು ಬಧಲಿಸಿ ಈಶಾನ್ಯದ ಕಡೆಗೆ ಸಾಗಲಿದೆ. ಇದರಿಂದ ನೈರುತ್ಯ ಮುಂಗಾರು ಸಾಗಿ ಬರಲು ಅನುಕೂಲವಾಗಬಹುದು.
No comments:
Post a Comment