Advertise

18 May 2026

19.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸಣ್ಣ ಹನಿ ಮಳೆಯ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ 20ರಿಂದ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮೇ 26ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ 20ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿದ್ದು, 26ರಿಂದ ಹೆಚ್ಚಾಗಬಹುದು. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 20ರಿಂದ ರಾಜ್ಯದ ಉತ್ತರ ಒಳನಾಡಿನ ಮಳೆಯ ಪ್ರಮಾಣ ಹಾಗೂ ವ್ಯಾಪ್ತಿ ಕಡಿಮೆಯಾಗುವ ಸೂಚನೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 20ರಿಂದ ಮಳೆಯ ಪ್ರಮಾಣವು ಕಡಿಮೆಯಾಗುವ ಲಕ್ಷಣಗಳಿವೆ. 

ಹಿಂದುಮಹಾಸಾಗರ ಮೂಲಕ ಸಾಗಿ ಬರುವ ಮುಂಗಾರು ಮಾರುತಗಳು ದುರ್ಬಲಗೊಳ್ಳತ್ತಲಿದ್ದರೂ, ಸೋಮಾಲಿಯ ಜೆಟ್ ವೇವ್ಸ್ ಮೂಲಕ ಅರಬ್ಬಿ ಸಮುದ್ರದಲ್ಲಿ ಮೇ 26ರಿಂದ ಮಾರುತಗಳು ಚುರುಕಾಗುವ ಲಕ್ಷಣಗಳಿವೆ. ರಾಜ್ಯದಲ್ಲೂ ಮುಂಗಾರು ರೀತಿಯ ಮಳೆ ಆರಂಭವಾಗುವ ಸಾಧ್ಯತೆಗಳಿವೆ 

No comments:

Post a Comment

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...