ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. ಆದರೆ IMD ಮುನ್ಸೂಚನೆಯಂತೆ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 20ರಿಂದ ಮಳೆಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ. ಮೇ 27ರಿಂದ ಮಳೆ ಆರಂಭವಾಗಬಹುದು.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 20ರಿಂದ ಮಳೆ ಕ್ಷೀಣಿಸುವ ಲಕ್ಷಣಗಳಿವೆ. 27ರಿಂದ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 20ರಿಂದ ಮಳೆಯ ಪ್ರಮಾಣವು ಕಡಿಮೆಯಾಗುವ ಸೂಚನೆಗಳಿವೆ ಸೂಚನೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 20ರಿಂದ ಮಳೆಯ ಪ್ರಮಾಣವು ಕಡಿಮೆಯಾಗುವ ಲಕ್ಷಣಗಳಿವೆ.
ಮೇ 20ರಿಂದ ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಮೂಲಕ ಒಳ ಬೀಸುತ್ತಿರುವ ಗಾಳಿಯು
ಈಶಾನ್ಯಕ್ಕೆ ಸಾಗುವ ಮೂಲಕ ಮುಂಗಾರು ಮಾರುತಗಳಿಗೆ ಅನುಕೂಲವಾಗಲಿದ್ದು, ಪೂರ್ವ ಮುಂಗಾರು ಮಳೆಯು ಕಡಿಮೆಯಾಗಲಿದೆ. ಮುಂಗಾರು ಚುರುಕಾಗಲು ಸಮಯ ಬೇಕಾಗಬಹುದು. ಅಂಡಮಾನ್ ನಿಕೋಬಾರ್ ತಲುಪಿದ ಮುಂಗಾರು ಮುಂದೆ ಸರಿಯಲು ಅರಬ್ಬಿ ಸಮುದ್ರದಲ್ಲಿ ವಾತಾವರಣ ಅನುಕೂಲಕರವಾಗಿಲ್ಲ. ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ.
No comments:
Post a Comment