Advertise

20 May 2026

21.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಮೇ 26ರ ನಂತರ ಮುಂಗಾರು ಆಗಮನದ ನಿರೀಕ್ಷೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮೇ 26 ಅಥವಾ 27ರಿಂದ ಮುಂಗಾರು ಆಗಮನದ ನಿರೀಕ್ಷೆ ಇದೆ. 

 ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿಯ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಹಾಗೂ ಯಾದಗಿರಿ, ರಾಯಚೂರು ಜಿಲ್ಲೆಗಳ ಆಂದ್ರಾ ಗಡಿಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 25ರ ನಂತರ ಪರಿಸ್ಥಿತಿ ಕಾದು ನೋಡಬೇಕಾಗಿದೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. 

ಅರಬ್ಬಿ ಸಮುದ್ರದಲ್ಲಿ ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಸುಮಾರು ಮೇ 25ರಂದು ಈ ತಿರುಗುವಿಕೆಯು ಯವನ್ ಕರಾವಳಿಗೆ ತಲಪುವ ನಿರೀಕ್ಷೆಯಿದೆ. 
ಇದರಿಂದ ಮುಂಗಾರು ಮಾರುತಗಳು ತಡೆಯಲ್ಪಟ್ಟು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. ಮೇ ಕೊನೆಯಲ್ಲಿ ಸ್ವಲ್ಪ ಚುರುಕಾಗಬಹುದು. 
ಆದರೆ ಈಗ ಸೋಮಾಲಿಯ ಜೆಟ್ ವೇವ್ಸ್ ಪ್ರಭಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಉತ್ತರ ಭಾರತದ ಕಡೆ ಮಳೆಯಾಗುವ ಸಾಧ್ಯತೆಗಳಿವೆ. 

No comments:

Post a Comment

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...