ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮೇ 30ರ ತನಕವೂ ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮೇ ಕೊನೆಯ ತನಕವೂ ಜೋರು ಮಳೆಯ ಸಾಧ್ಯತೆ ಕಡಿಮೆಯಾಗಿದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಉತ್ತರ ಹಿಂದೂ ಮಹಾಸಾಗರ ಹಾಗೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳಗೆ ಸ್ಪಷ್ಟವಾದ ಪೂರಕ ವಾತಾವರಣ ಇಲ್ಲದಿರುವುದರಿಂದ ಮುಂಗಾರು ಮುಂದುವರಿಕೆಗೆ ಅಡ್ಡಿಯಾಗಿದೆ.
ಮುಂಗಾರು ನಿರೀಕ್ಷಿತ ಸಮಯದಲ್ಲಿ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆಗಳು ಕ್ಷೀಣಿಸುತ್ತಿವೆ. ಇದರೊಂದಿಗೆ ಇನ್ನೆರಡು ದಿನಗಳಲ್ಲಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಸೋಮಾಲಿಯ ಜೆಟ್ ವೇವ್ಸ್ ಪ್ರಭಲಗೊಳ್ಳುವ ಲಕ್ಷಣಗಳಿವೆ.
No comments:
Post a Comment