Advertise

23 May 2026

23.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಾಧ್ಯತೆಯೂ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 24ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು 24ರಿಂದ ರಾಜ್ಯದ ಮಲ ಮಳೆ ಕಡಿಮೆಯಾಗುವ ಸೂಚನೆಗಳಿವೆ. 

ಉತ್ತರ ಒಳನಾಡು : ಬಾಗಲಕೋಟೆ, ಗದಗ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಮಳೆಯ ಸಾಧ್ಯತೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 24ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 24ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. 

ದಕ್ಷಿಣ ದ್ರವದ ಕಡೆಯಿಂದ ಬರುವ ಸೋಮಾಲಿಯ ಜೆಟ್ ವೇವ್ಸ್ ಕಾರಣದಿಂದ ಈಗ ಮಳೆ ವಯಾಗುತ್ತಿದ್ದು, ದಕ್ಷಿಣ ದ್ರವದ ಬಳಿ ಇರುವ ತಿರುಗುವಿಕೆಯು ಆಸ್ಟ್ರೇಲಿಯಾದ ನೈರುತ್ಯ ಕರಾವಳಿಗೆ ಬರುತ್ತಿದ್ದಂತೆಯೇ ಮುಂಗಾರು ಮಾರುತಗಳು ಚುರುಕಾಗಬಹುದು.
ಈಗಿನಂತೆ ಮುಂಗಾರು ಮೇ 30ರ ಸುಮಾರಿಗೆ ರಾಜ್ಯಕ್ಕೆ ಪ್ರವೇಶಿಸಲಿದೆ. 

No comments:

Post a Comment

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...