Advertise

23 May 2026

24.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


24.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಳೆ ಮುಂದುವರಿಯುವ ಲಕ್ಷಣಗಳಿವೆ.  

ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಈ ಮಳೆಯು ಮುಂದುವರಿಯುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಈ ಮಳೆಯು ಮುಂದುವರಿಯುವ ಸೂಚನೆಗಳಿವೆ. 

ಮೇ 30ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ. 

No comments:

Post a Comment

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...