ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಈಗಾಗಲೇ ಮುಂಜಾನೆ ಮಳೆಯಾಗಿದ್ದು, ಇನ್ನು ಹಗಲು ಮೋಡದ ವಾತಾವರಣದೊಂದಿಗೆ ಸಂಜೆ, ರಾತ್ರಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ಈಗಿನ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ವೇಳೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ಮಳೆಯು ಮುಂದುವರಿಯುವ ಸೂಚನೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನಿನ್ನೆ ಉತ್ತಮ ಮಳೆಯಾಗಿದ್ದು, ಇವತ್ತು ಸಹ ಸಂಜೆ, ರಾತ್ರಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಿನ್ನೆ ಮಳೆಯ ಮುನ್ಸೂಚನೆ ಇದ್ದರೂ ಪ್ರಮಾಣ ಕಡಿಮೆ ಇತ್ತು. ಇವತ್ತು ಸಹ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ಅಥವಾ 3 ದಿನಗಳ ಕಾಲ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ಮಧ್ಯಮ ಸ್ತರದ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶವು ತಡವಾಗುವ ಸಾಧ್ಯತೆಗಳು ಗೋಚರಿಸುತ್ತಿವೆ.
No comments:
Post a Comment