ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಾವೇರಿ, ಶಿವಮೊಗ್ಗ ಜಿಲ್ಲೆಗಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 6, ರಂದು ಮುಂಗಾರು ಆಗಮನದ ನಿರೀಕ್ಷೆ ಇದ್ದು, ಅಲ್ಲಿಯ ತನಕ 2 ಅಥವಾ 3 ಮಳೆಯ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಇವತ್ತು ಹಾಗೂ ಮೇ 27ರಂದು ಮಳೆಯ ಮುನ್ಸೂಚನೆ ಇದ್ದು, ನಂತರ ಕಡಿಮೆಯಾಗುವ ಲಕ್ಷಣಗಳಿವೆ. ಮುಂಗಾರು ಜೂನ್ 7 ಅಥವಾ 8ರಿಂದ ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 27ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಬಹುದು.
ಬಂಗಾಳಕೊಲ್ಲಿಯಲ್ಲಿ ಜೂನ್ 2 ಅಥವಾ ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ಮುಂಗಾರು ಸ್ವಲ್ಪ ಮಟ್ಟಿಗೆ ಚುರುಕಾಗುವ ಸಾಧ್ಯತೆಗಳಿವೆ.
ಆದರೆ ಸೋಮಾಲಿಯಾ ಜಟ್ ಸ್ಟ್ರೀಮ್ ಗಳು ಉತ್ತರಕ್ಕೆ ಸೆಳೆಯಲ್ಪಡುವುದರಿಂದ ಮಹಾರಾಷ್ಟ್ರ ಕರಾವಳಿಯಲ್ಲಿ ಹೆಚ್ಚು ಮಳೆಯ ಸಾಧ್ಯತೆಗಳಿವೆ.
No comments:
Post a Comment