Advertise

27 May 2026

28.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


28.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ಕರಾವಳಿ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇವತ್ತು ಸಹ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ( ನಿನ್ನೆ ಮುನ್ಸೂಚನೆಯಂತೆ ಮಳೆಯಾಗಿಲ್ಲ. ಕೆಲವು ಮಾತ್ರ ಸಾಮಾನ್ಯ ಮಳೆಯಾಗಿದೆ.)  ಉತ್ತರ ಕನ್ನಡ ಜಿಲ್ಲೆಯ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ 28ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. 

ಮಲೆನಾಡು : ರಾಜ್ಯದ ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. (ನಿನ್ನೆ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಿದೆ.) 
ಈಗಿನಂತೆ ಮೇ 28ರಿಂದ ಮಳೆಯ ಸಾಧ್ಯತೆಗಳು ಕಡಿಮೆಯಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಗಾಳಿಯ ಒತ್ತಡ ಹೆಚ್ಚಿದ್ದರೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ. 
ಈಗಿನಂತೆ ಮೇ 28ರಿಂದ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಮೇ 29ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ. 

ಬಂಗಾಳಕೊಲ್ಲಿಯಲ್ಲಿ ಜೂನ್ 3ರಿಂದ ವಾಯುಭಾರ ಕುಸಿತದಂತ ತಿರುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜೂನ್ 4 ರಂದು ಮುಂಗಾರು ಕೇರಳಕ್ಕೆ ಹಾಗೂ 5ರಂದು ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. 


No comments:

Post a Comment

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...