ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಈಗಿನಂತೆ ಮೇ 29ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗಲಿದೆ. ಜೂನ್ 4ರಿಂದ ಮುಂಗಾರು ಆರಂಭವಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮೇ 29ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಉತ್ತರ ಒಳನಾಡು ; ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕೆಲವು ಕಡೆ ಅನಿರೀಕ್ಷಿತ ಮಳೆಯ ನಿರೀಕ್ಷೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡಿನ ಕಲಬುರ್ಗಿ, ಬೀದರ್ಮುಂ ಹಾಗೂ ಯಾದಗಿರಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂದಿನ ದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ವಿಜಯನಗರ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಿದ್ದರೆ ಮಾತ್ರ ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇ 29ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಲಕ್ಷಣಗಳು ಕಡಿಮೆಯಾಗುತ್ತಿದೆ. ಇದರಿಂದ ಸುಮಾರು ಜೂನ್ 4ರಂದು ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದರೂ, ದುರ್ಬಲವಾಗಿರುವ ಸಾಧ್ಯತೆಗಳಿವೆ.
ಸೋಮಾಲಿಯ ಜೆಟ್ ಸ್ಟ್ರೀಮ್ ನ ಪರಿಣಾಮದಿಂದ ಜೂನ್ ತಿಂಗಳಲ್ಲಿ ಮಹಾರಾಷ್ಟ್ರ ಹಾಗೂ ಉತ್ತರ ಭಾರತದ ಕಡೆ ಮಳೆ ಹೆಚ್ಚಿರುವ ಸಾಧ್ಯತೆಗಳಿವೆ.
No comments:
Post a Comment