Advertise

29 May 2026

30.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದು, ಜೂನ್ 4ರಿಂದ ಮುಂಗಾರು ಆರಂಭವಾಗುವ ಸೂಚನೆಗಳಿವೆ. ಆದರೆ ಜೋರು ಮಳೆಯಾಗಲು ಜೂನ್ 7ರ ತನಕ ಕಾಯಬೇಕಾದೀತು.

ಮಲೆನಾಡು : ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿ ವೇಳೆ ಕೊಡಗು ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 1ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಆದರೆ ಬಳ್ಳಾರಿಯ ಒಂದೆರಡು ಕಡೆ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ಇದೇ ವಾತಾವರಣ ಮುಂದಿನ 10 ದಿನಗಳವರೆಗೂ ಮುಂದುವರಿಯುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು(ಪಾವಗಢ ಸಹಿತ), ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 1ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. 

ಜೂನ್ ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ. ಆದರೆ ಮುಂಗಾರು ಆರಂಭ ದುರ್ಬಲವಾಗಿರುವ ಲಕ್ಷಣಗಳಿವೆ. ಸೋಮಾಲಿಯ ಜೆಟ್ ವೇವ್ಸ್ ನಿಂದ ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ಹೆಚ್ಚು ಮಳೆಯಾಗುವ ಲಕ್ಷಣಗಳಿವೆ. 
ಈಗಿನಂತೆ ಜೂನ್ 7ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಗಳಿವೆ. 

No comments:

Post a Comment

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...