ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಮೇ 31ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಜೂನ್ 1ರಿಂದ ಮಳೆ ಕಡಿಮೆಯಾಗಿ ಜೂನ್ 7ರ ಸುಮಾರಿಗೆ ಮುಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ. ಮುಂಗಾರು ಆರಂಭ ದುರ್ಬಲವಾಗಿರಲಿದೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ? ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 1ರಿಂದ ಮಳೆ ಕಡಿಮೆಯಾಗಿ ಜೂನ್ 7ರಿಂದ ಮುಂಗಾರು ಆಗಮನದ ನಿರೀಕ್ಷೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಳೆ ಮೇ 31ರ ತನಕ ಮುಂದುವರಿಯುವ ಲಕ್ಷಣಗಳಿವೆ.
ಮುಂಗಾರು ಜೂನ್ ರಂದು ಆಗಮನದ ನಿರೀಕ್ಷೆ ಇದ್ದರೂ, ದುರ್ಬಲವಾಗಿರುವ ಸಾಧ್ಯತೆಗಳಿವೆ.
No comments:
Post a Comment