ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ತಡ ರಾತ್ರಿ ಕರಾವಳಿ ತೀರ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಅಥವಾ ತುಂತುರು ಇರಬಹುದು.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 2ರಿಂದ ಮೋಡದ ವಾತಾವರಣ ಹೆಚ್ಚಾಗುವ ನಿರೀಕ್ಷೆ ಇದ್ದು, 4ರಿಂದ ಮುಂಗಾರು ಆರಂಭವಾಗುವ ಸೂಚನೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ
ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ, ರಾತ್ರಿಯ ಗುಡುಗು ಮಳೆ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ ಉತ್ತರ, ಕೊಪ್ಪಳ, ರಾಯಚೂರು, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ರಾತ್ರಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಳೆ ಮುಂದುವರಿಯುವ ಲಕ್ಷಣಗಳಿವೆ.
ಜೂನ್ 4ರಿಂದ ರಾಜ್ಯದ ಕರಾವಳಿಯಲ್ಲಿ ಮುಂಗಾರು ರೀತಿಯ ಮೋಡದ ಚಲನೆ ಆರಂಭವಾಗುವ ಲಕ್ಷಣಗಳಿದ್ದರೂ, ಜೂನ್ 8ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.
No comments:
Post a Comment