ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ಮಳೆ ಆರಭವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಕಡಲ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿದೆ.
ಈ ಮಳೆಯು ಮುಂದುವರಿಯುವ ಮುನ್ಸೂಚನೆ ಇದ್ದು, ಜೂನ್ 4ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕಡಲ ತೀರ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ. ಉತ್ತರ ಕನ್ನಡ ಜಿಲ್ಲೆಯ ಕಡಲ ತೀರ ಭಾಗಗಳಲ್ಲಿ ಸಾಮಾನ್ಯ ಹಾಗೂ ಉಳಿದ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಹೆಚ್ಚಿರಬಹುದು.
ಈಗಿನಂತೆ ಜೂನ್ 8ರಿಂದ ಮುಂಗಾರಿನ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಹಾವೇರಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದ್ದು,
ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 6ರ ತನಕ ಗುಡುಗು ಮಳೆ ಮುಂದುವರಿಯಲಿದ್ದು, ನಂತರ ಕಡಿಮೆಯಾದರೂ ಜೂನ್ 11ರಿಂದ ಮುಂಗಾರು ಮಳೆಯ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 7ರ ತನಕ ಈ ಮಳೆಯು ಮುಂದುವರಿಯುವ ಸೂಚನೆಗಳಿವೆ. ನಂತರ ಕಡಿಮೆಯಾದರೂ ಜೂನ್ 10ರಿಂದ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದ್ದು, ಮುಂಗಾರು ಹಾಗೂ ಸೋಮಾಲಿಯಾ ಜಟ್ ಸ್ಟ್ರೀಮ್ ಗಳಿಂದ ರಾಜ್ಯದಲ್ಲಿ ಜೂನ್ 12ರ ತನಕ ಉತ್ತಮ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.
ಈಗಿನಂತೆ ಜೂನ್ 13 ಅಥವಾ 14ರಿಂದ ಮಳೆ ಸ್ವಲ್ಪ ಕಡಿಮೆಯಾಗುವ ಸೂಚನೆಗಳಿವೆ. ಆದರೂ ಬದಲಾವಣೆಯನ್ನು ಕಾದು ನೋಡಬೇಕಾಗಿದೆ.
No comments:
Post a Comment