Advertise

05 June 2026

06.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಕಡಲ ತೀರದ ಸುತ್ತಮುತ್ತ ಭಾಗಗಳಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ದಿನದಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 8ರಿಂದ 13ರ ತನಕ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಜೂನ್ 7ರ ತನಕ ಮುಂದುವರಿಯುವ ಸಾಧ್ಯತೆಗಳಿದ್ದು, ನಂತರ ಮಳೆ ಹೆಚ್ಚಾಗುವ ಲಕ್ಷಣಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 7ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಕಡಿಮೆಯಾದರೂ, ಜೂನ್ 10ರಿಂದ ಮತ್ತೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 11ರ ತನಕ ಅಲ್ಲಲ್ಲಿ ಸಾಮಾನ್ಯ ಮುಂದುವರಿಯುವ ಲಕ್ಷಣಗಳಿದ್ದು, ಜೂನ್ 12ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಆಸ್ಟ್ರೇಲಿಯಾ ಕಡೆಯಿಂದ ಹಿಂದೂಮಹಾಸಾಗರದ ಮೂಲಕ ಮುಂಗಾರು ಮಾರುತಗಳ ಚಲನೆ ಉತ್ತಮವಾಗಿದ್ದು, ಸೋಮಾಲಿಯ ಜೆಟ್ ಸ್ಟ್ರೀಮ್ ನ ಪ್ರಭಾವ ಕಡಿಮೆಯಾಗಿದೆ. ಮುಂದಿನ 4, 5 ದಿವಸಗಳಲ್ಲಿ ಆಸ್ಟ್ರೇಲಿಯಾ ಕಡೆಯಿಂದ ಬೀಸುವ ಮಾರುತಗಳು ಮಂದವಾಗುವ ಸಾಧ್ಯತೆಗಳಿದ್ದು, ದಕ್ಷಿಣ ದ್ರವದ ಕಡೆಯಿಂದ ಸೋಮಾಲಿಯಾ ಜಟ್ ಸ್ಟ್ರೀಮ್ ಮಾರುತಗಳು ಪ್ರಭಲಗೊಳ್ಳುವ ಸೂಚನೆಗಳಿವೆ. 

No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...