Advertise

06 June 2026

07.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಜೂನ್ 8ರಿಂದ ಸ್ವಲ್ಪ ಚೇತರಿಕೆಯ ಸಾಧ್ಯತೆಗಳಿದ್ದರೂ ಜೂನ್ 12 ಅಥವಾ 13ರಿಂದ ಮತ್ತೆ ದುರ್ಬಲಗೊಳ್ಳುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 8ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿದ್ದರೂ 13ರಿಂದ ದುರ್ಬಲಗೊಳ್ಳುವ ಸಾಧ್ಯತೆಗಳಿವೆ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ರಾಯಚೂರು, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಉತ್ತರ ಒಳನಾಡಿನ ಈಗಿನ ಮಳೆಯು ಜೂನ್ 12ರ ತನಕ ಮುಂದುವರಿಯುವ ಸಾಧ್ಯತೆಗಳಿವೆ. 

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡಿನ ಈಗಿನ ಮಳೆಯು ಜೂನ್ 11ರ ತನಕ ಮುಂದುವರಿಯುವ ಲಕ್ಷಣಗಳಿವೆ. 

ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದರೂ ದುರ್ಬಲವಾಗಿರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್ 8ರಿಂದ ಮುಂಗಡ ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ. 



No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...