08.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 8ರಿಂದ ಮುಂಗಾರು ಚುರುಕಾಗಿ ಜೂನ್ 14ರ ತನಕ ಉತ್ತಮ ಮಳೆಯ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಇದ್ದು, ಸಂಜೆ, ರಾತ್ರಿ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಮುನ್ಸೂಚನೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಬಿಟ್ಟು ಬಿಟ್ಟು ಸಾಮಾನ್ಯ ಮಳೆ ಇದ್ದು, ಸಂಜೆ, ರಾತ್ರಿ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಮುನ್ಸೂಚನೆಗಳಿವೆ.
ಈಗಿನಂತೆ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 8ರಿಂದ ಮಳೆ ಸ್ವಲ್ಪ ಹೆಚ್ಚಾಗುವ ಸಾಧ್ಯತೆಗಳಿವೆ. ಜೂನ್ 15ರಿಂದ ಮಳೆಯ ಪ್ರಮಾಣ ಕಡಿಮೆಯಾಗಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕಲಬುರ್ಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 11ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 10ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಅರಬ್ಬಿ ಸಮುದ್ರದ ರಾಜ್ಯದ ಕರಾವಳಿಯಲ್ಲಿ ಮಧ್ಯಮ ಸ್ತರದ ಗಾಳಿಯ ತಿರುಗುವಿಕೆ ಉಂಟಾಗಿದ್ದು, ಮುಂಗಾರು ಮಾರುತಗಳ ವಿರುಧ್ಧ ದಿಕ್ಕಿಗೆ ಬೀಸುವುದರಿಂದ, ಕರಾವಳಿಯಲ್ಲಿ ಭಾರಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿ, ಉತ್ತಮ ಮಳೆಯ ನಿರೀಕ್ಷೆ ಇದೆ.
ಇದು ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ಸ್ವಲ್ಪ ಚುರುಕಾಗುವ ಸಾಧ್ಯತೆಗಳಿವೆ.
No comments:
Post a Comment