Advertise

09 June 2026

10.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ, ಹಾಗೂ ಉಳಿದ ಭಾಗಗಳಲ್ಲಿ ದಿನದಲ್ಲಿ 2, 3 ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜೂನ್ 15ರ ನಂತರ ಕಡಿಮೆಯಾಗುವ ಸೂಚನೆಗಳಿವೆ.

ಮಲೆನಾಡು : ಹಾಸನ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದು, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಜೂನ್ 16ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಹಾಗೂ ರಾಯಚೂರು, ಯಾದಗಿರಿ ಜಿಲ್ಲೆಗಳ ಆಂದ್ರಾ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಜೂನ್ 16ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೋಡ ಹಾಗೂ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 13ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಅರಬ್ಬಿ ಸಮುದ್ರದ ಮಧ್ಯಮ ಸ್ತರದ ಗಾಳಿಯ ತಿರುಗುವಿಕೆ ಮುಂದುವರಿದಿರುವುದರಿಂದ ಮುಂಗಾರು ದುರ್ಬಲವಾಗಿದೆ. 
ಮೇಲ್ಸ್ತರದಲ್ಲಿ ಆಸ್ಟ್ರೇಲಿಯಾ ಕಡೆಯಿಂದ ಬೀಸುವ ಮಾರುತಗಳು ದುರ್ಬಲವಾಗಿದ್ದು, ಸೋಮಾಲಿಯ ಜೆಟ್ ಸ್ಟ್ರೀಮ್ ಪ್ರಭಲಗೊಂಡಿದೆ. 

No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...