Advertise

10 June 2026

11.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ದಿನದಲ್ಲಿ 2, 3 ಸಾಮಾನ್ಯ ಮಳ ಮುಂದುವರಿಯುವ ಮುನ್ಸೂಚನೆ ಇದೆ. 
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ದುರ್ಬಲ ಮುಂಗಾರು ಕಾರಣದಿಂದ ಭಾರಿ ಮಳೆಯ ಸಾಧ್ಯತೆಗಳು ಕಡಿಮೆಯಾಗಿದೆ. 

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇಲ್ಲ. 

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಉತ್ತರ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳಲ್ಲಿ 6 ಅಥವಾ 7 ದಿನಗಳ ಕಾಲ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಮುಂಗಾರಿಗೆ ಪೂರಕವಾದ ವಾತಾವರಣದಲ್ಲಿ ಬದಲಾವಣೆಯಾಗುತ್ತಿದೆ. ಆಸ್ಟ್ರೇಲಿಯಾ ಕಡೆಯಿಂದ ಬೀಸುವ ಮಾರುತಗಳು ದುರ್ಬಲವಾಗಿದೆ. ಸೋಮಾಲಿಯ ಜೆಟ್ ಸ್ಟ್ರೀಮ್ ಗಳು ಸ್ವಲ್ಪ ಮಟ್ಟಿಗೆ ಚುರುಕಾಗದ ಕಾರಣ ಸಾಮಾನ್ಯ ಮುಂಗಾರು ಮುಂದುವರಿಯಬಹುದು. 

No comments:

Post a Comment

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು,...