ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ವಾತಾವರಣ ಇವತ್ತು ಗೋಚರಿಸುತ್ತಿವೆ. ದಿನದ ಹೆಚ್ಚಿನ ಅವಧಿಯೂ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 14 ಅಥವಾ 15ರಿಂದ ಈಗಿನ ಮಳೆಯು ಕಡಿಮೆಯಾಗಿ ದಿನದಲ್ಲಿ 2, 3 ಮಳೆಗೆ ಸೀಮಿತಗೊಳ್ಳುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ
ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ವಾತಾವರಣವು ಜೂನ್ 17ರ ತನಕ ಮುಂದುವರಿಯುವ ಸಾಧ್ಯತೆಗಳಿವೆ. ನಂತರ ಕಡಿಮೆಯಾಗಬಹುದು.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಹಾವೇರಿ, ಗದಗ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಕಾಲ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಬಹುದು.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮಳೆಯ ಮುನ್ಸೂಚನೆ ಇದ್ದು, ಚಾಮರಾಜನಗಲ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳಿವೆ.
ಈಗಿನ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮಳೆಯು ಕರಾವಳಿ ಬಳಿ ಗಾಳಿಯ ಒತ್ತಡ, ಚಲನೆ ಕಡಿಮೆಯಾದ ಕಾರಣ ಉಂಟಾಗಿದೆ. ಮುಂದಿನ 2 ಅಥವಾ 3 ದಿನಗಳಲ್ಲಿ ಸಾಮಾನ್ಯ ಸ್ಥಿತಿಗೆ ತಲುಪುತ್ತಿದ್ದಂತೆಯೆ ಮಳೆ ಕಡಿಮೆಯಾಗುವ ಸಾಧ್ಯತೆಗಳಿವೆ.
No comments:
Post a Comment